ಮಂಚರ್ಯಾಲ(ತೆಲಂಗಾಣ):ಜಿಲ್ಲೆಯ ಮಂದಮರ್ರಿ ತಾಲೂಕಿನ ವೆಂಕಟಾಪುರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಮನೆ ಮಾಲೀಕ ಸೇರಿ ಒಂದೇ ಕುಟುಂಬದ ಆರು ಜನ ಸಜೀವ ದಹನವಾಗಿದ್ದಾರೆ.
ಈ ಬೆಂಕಿ ಅವಘಡದಲ್ಲಿ ಮನೆ ಯಜಮಾನ ಶಿವಯ್ಯ (50), ಅವರ ಪತ್ನಿ ಪದ್ಮಾ (45), ಪದ್ಮಾ ಅವರ ಅಕ್ಕನ ಮಗಳು ಮೌನಿಕಾ (23) ಮತ್ತು ಆಕೆಯ ಇಬ್ಬರು ಪುತ್ರಿಯರು ಹಾಗು ಸಂಬಂಧಿ ಶಾಂತಯ್ಯ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.