ಮುಂಬೈ: ನಗರದ ಬೋರಿವಲಿಯಲ್ಲಿರುವ ಬಹು ಅಂತಸ್ತಿನ ವಸತಿ ಕಟ್ಟಡದ ಏಳನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಕಾರ್ಯಾಚರಣೆಯಲ್ಲಿ ತೊಡಗಿದ್ದ ಓರ್ವ ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈನ ಬೋರಿವಲಿ ಪಶ್ಚಿಮದಲ್ಲಿರುವ ಗಂಜವಾಲಾ ರೆಸಿಡೆನ್ಸಿ ಕಟ್ಟಡದಲ್ಲಿ ಬೆಳಗ್ಗೆ 7 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ, ನಿವಾಸಿಗಳನ್ನು ರಕ್ಷಿಸಿದ್ದಾರೆ.