ರಾಮ್ಗಢ (ಜಾರ್ಖಂಡ್):ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಐವರು ಪ್ರಾಣ ಕಳೆದುಕೊಂಡ ಘಟನೆ ಜಾರ್ಖಂಡ್‌ನ ರಾಮ್ಗಢ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ರಾಜ್ರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮುರಬಂದ್ನ ರಾಷ್ಟ್ರೀಯ ಹೆದ್ದಾರಿ 23ರಲ್ಲಿ ದುರ್ಘಟನೆ ನಡೆದಿದೆ.
ಬಸ್-ಕಾರು ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ ಐವರು ಸಜೀವ ದಹನ - jharkhand
ಮೃತರಲ್ಲಿ ಮೂವರು ಪುರುಷರು, ಇಬ್ಬರು ಮಹಿಳೆಯರು ಸೇರಿದ್ದಾರೆ. ಮೃತರೆಲ್ಲರೂ ಪುಣೆ ಮೂಲದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಸ್-ಕಾರಿನ ನಡುವೆ ಭೀಕರ ಅಪಘಾತ
ಮೃತರಲ್ಲಿ ಮೂವರು ಪುರುಷರು, ಇಬ್ಬರು ಮಹಿಳೆಯರು ಸೇರಿದ್ದಾರೆ. ಮೃತರೆಲ್ಲರೂ ಪುಣೆ ಮೂಲದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಸ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ:ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಅಪಘಾತ ಪ್ರಕರಣ... ವೇಗದ ಚಾಲನೆಯೇ ದುರಂತಕ್ಕೆ ಕಾರಣ : ಟ್ರಾಫಿಕ್ ಕಮಿಷನರ್