ದೆಹಲಿ: ರಾಷ್ಟ್ರ ರಾಜಧಾನಿಯ ಟೆಕ್ರಿ ಕಲಾ ಪ್ರದೇಶದ ಪಿವಿಸಿ ಮಾರುಕಟ್ಟೆಯ ಗೋಡೌನ್ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ 10 ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಆದರೆ, ಜ್ವಾಲೆ ಮತ್ತಷ್ಟು ಉಲ್ಬಣಗೊಂಡಿದ್ದು, ಅಂದಾಜು 26 ಕ್ಕೂ ಅಗ್ನಿಶಾಮಕ ದಳದ ವಾಹನಗಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಭಾರಿ ಅಗ್ನಿ ಅವಘಡ.. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ
ಪಿವಿಸಿ ಮಾರ್ಕೆಟ್ನ ಗೋಡೌನ್ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ಹತೋಟಿಗೆ ತರಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ದೆಹಲಿಯಲ್ಲಿ ಭಾರಿ ಅಗ್ನಿ ಅವಘಡ.
ಘಟನೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಹೇಳಲಾಗ್ತಿದೆ.
ಮಾಹಿತಿ ಪ್ರಕಾರ ಭಾನುವಾರ ರಾತ್ರಿ 8.30ರ ಸುಮಾರಿಗೆ ಅವಘಡ ಸಂಭವಿಸಿದ್ದು, ಅಲ್ಲಿನ ಸಿಬ್ಬಂದಿ ಫೈರ್ ಎಂಜಿನ್ಗೆ ಕರೆ ಮಾಡಿ ತಿಳಿಸಿದ್ದಾರೆ. ಅಧಿಕಾರಿಗಳು ಮೊದಲಿಗೆ 10 ವಾಹನಗಳನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದಾರೆ. ಆದರೆ, ಬೆಂಕಿಯ ಜ್ವಾಲೆ ಸುತ್ತಮುತ್ತಲಿನ ಪ್ರದೇಶಕ್ಕೂ ವ್ಯಾಪಿಸಿದ್ದರಿಂದ ಮತ್ತಷ್ಟು ಸಿಬ್ಬಂದಿಯನ್ನು ಹೆಚ್ಚಿಸಲಾಯಿತು.