ನಾಸಿಕ್ (ಮಹಾರಾಷ್ಟ್ರ): ನೆರೆಯ ಮಹಾರಾಷ್ಟ್ರದ ನಾಸಿಕ್ನಲ್ಲಿ ಮತ್ತೊಂದು ಬಸ್ಗೆ ಬೆಂಕಿ ಬಿದ್ದಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ನಲ್ಲಿದ್ದ 33 ಜನ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ.
ಇಲ್ಲಿನ ವಾಣಿಗೆ ತೆರಳುತ್ತಿದ್ದ ಬಸ್ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಬಸ್ ಧಗಧಗನೆ ಉರಿದಿದೆ. ಈ ಬೆಂಕಿ ಅವಘಡದಲ್ಲಿ ಬಸ್ ಸುಟ್ಟು ಕರಕಲಾಗಿದೆ. ಸ್ಥಳೀಯರು ಹಾಗೂ ಸ್ಥಳೀಯ ಆಡಳಿತ ಮಂಡಳಿಯವರು ಬೆಂಕಿ ನಂದಿಸಿದ್ದಾರೆ.