ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಇಂದು ಪತ್ತೆಯಾಗಿದೆ. ಯಾವುದೇ ವಿದೇಶ ಪ್ರಯಾಣದ ಹಿನ್ನೆಲೆಯಿಲ್ಲದ 31 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ ಎಂದು ಲೋಕನಾಯಕ ಜೈ ಪ್ರಕಾಶ್ ನಾರಾಯಣ್ (ಎಲ್‌ಎನ್‌ಜೆಪಿ) ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಸುರೇಶ್ ಕುಮಾರ್ ಹೇಳಿದ್ದಾರೆ.
ಮಂಕಿಪಾಕ್ಸ್ ವೈರಾಣುವಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಸೋಂಕಿತ ವ್ಯಕ್ತಿಯನ್ನು ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮಂಕಿಪಾಕ್ಸ್ ಪತ್ತೆಯಾಗಿ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ (ಎನ್‌ಐವಿ) ರವಾನಿಸಲಾಗಿದೆ. ಸೋಂಕಿತ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕ ಹೊಂದಿದವರನ್ನು ಗುರುತಿಸಿ ಪ್ರತ್ಯೇಕ ವಾಸಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.