ನವದೆಹಲಿ: 'ಆಜಾದಿ ಕಾ ಅಮೃತ ಮಹೋತ್ಸವ'ದ ಅಂಗವಾಗಿ ಇಂದಿನಿಂದ ಅಕ್ಟೋಬರ್ 2 ರವರೆಗೆ ನಡೆಯಲಿರುವ 'ಫಿಟ್ ಇಂಡಿಯಾ ಫ್ರೀಡಂ ರನ್ 2.0' ಅಭಿಯಾನಕ್ಕೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ ನಿಶಿತ್ ಪ್ರಾಮಾಣಿಕ್ ಅವರು ಚಾಲನೆ ನೀಡಿದ್ದಾರೆ.
'ನಾವು ಫಿಟ್ ಇಂಡಿಯಾ ಫ್ರೀಡಂ ರನ್ 2.0 ಅನ್ನು ದೇಶಾದ್ಯಂತ ಆರಂಭಿಸಿದ್ದೇವೆ. ಇದನ್ನು ಇಂದು 75 ಐತಿಹಾಸಿಕ ಸ್ಥಳಗಳಲ್ಲಿ ಪ್ರಾರಂಭಿಸಲಾಗಿದೆ. ಅಕ್ಟೋಬರ್ 2 ರವರೆಗೆ ನಡೆಯಲಿರುವ ಈ ಅಭಿಯಾನದಲ್ಲಿ ದೇಶದ ಪ್ರತಿ ಜಿಲ್ಲೆಯಿಂದ 75 ಹಳ್ಳಿಗಳು ಭಾಗವಹಿಸುತ್ತವೆ. ದೇಶಾದ್ಯಂತ 30,000 ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಲಾಗುವುದು. ನಾವು 75ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸುವಾಗ ಫಿಟ್ ಮತ್ತು ಆರೋಗ್ಯಕರ ಭಾರತಕ್ಕಾಗಿ ಸಂಕಲ್ಪ ಮಾಡಬೇಕು. ಆಗ ಮಾತ್ರ ಭಾರತ ಬಲಿಷ್ಠವಾಗಬಹುದು' ಎಂದು ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಓಟದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ನೆಹರು ಯುವ ಕೇಂದ್ರ ಸಂಘಟನೆ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಸಹ ಭಾಗವಹಿಸಿದ್ದಾರೆ.