ಆಂಧ್ರಪ್ರದೇಶದ ಪೂರ್ವ ಗೋದಾವರಿ, ವಿಜಯನಗರಂ ಮತ್ತು ಪ್ರಕಾಶಂ ಜಿಲ್ಲೆ ಮತ್ತು ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದ ಅಪಘಾತಗಳಲ್ಲಿ ಒಟ್ಟು 9 ಜನ ಸಾವನ್ನಪ್ಪಿದ್ದಾರೆ.
ಪೂರ್ವ ಗೋದಾವರಿ...
ಪೂರ್ವ ಗೋದಾವರಿ ಜಿಲ್ಲೆಯ ರಾವುಲಪಾಲೆಂ ತಾಲೂಕಿನ ಗೋಪಾಲಪುರಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಕಡಪ ಜಿಲ್ಲೆ ಮೈದುಕೂರುನಿಂದ ಕಾಕಿನಾಡಗೆ ಟೊಮೊಟೊ ತುಂಬಿದ್ದ ವ್ಯಾನ್ ಬೆಳಗಿನ ಜಾವ ಗೋಪಾಲಪುರಕ್ಕೆ ತಲುಪಿತ್ತು. ಬಳಿಕ ರಾಷ್ಟ್ರೀಯ ಹೈವೇಯಲ್ಲಿ ಬೈಕ್ ಡಿಕ್ಕಿ ಹೊಡೆದು ನೆಲಕ್ಕುರುಳಿ ಬಿದ್ದಿದೆ. ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಕಂಡೆಲ್ಲಿ ಸತೀಶ್ (21) ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಸುದ್ದಿ ತಿಳಿದ ಪೊಲೀಸರು ಘಟನಾಸ್ಥಳಕ್ಕೆ ದೌಡಾಯಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು.
ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಕೊಂಡೇಟಿ ಚಂಟಿ (20) ಪ್ರಾಣ ಬಿಟ್ಟಿದ್ದಾರೆ. ಕೊತ್ತಪೇಟ ತಾಲೂಕಿನ ಕಂಡ್ರಿಗ ಗ್ರಾಮದ ವಂಗಲಪುಡಿ ಸುರೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.
ಈ ಘಟನೆ ಕುರಿತು ಗೋಪಾಲಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿಜಯನಗರಂ...
ಕೆಲ ಗಂಟೆಗಳ ಹಿಂದೆ ವಿಜಯನಗರಂ ಜಿಲ್ಲೆಯ ಸೀತಾನಗರಂ ತಾಲೂಕಿನ ಲಚ್ಚಯ್ಯಪೇಟ ಬಳಿ ಆಟೋ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆಟೋ ಚಾಲಕ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆಯರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುದ್ದಿ ತಿಳಿದ ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಘಟನೆ ಕುರಿತು ಲಚ್ಚಯ್ಯಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.