ಕರ್ನಾಟಕ

karnataka

ETV Bharat / bharat

ಪಾರ್ವತಿ ನದಿಯಲ್ಲಿ ಮುಳುಗಿ ಐವರು ಸಾವು.. ದುರ್ಗಾ ಮೂರ್ತಿ ನಿಮಜ್ಜನ ವೇಳೆ ದುರಂತ - Dholpur durga idol immersion

ದುರ್ಗಾ ಮೂರ್ತಿ ನಿಮಜ್ಜನ ಮಾಡುವ ಸಂದರ್ಭದಲ್ಲಿ ಐವರು ಪಾರ್ವತಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ರಾಜಸ್ಥಾನದಲ್ಲಿ ಈ ದುರ್ಘಟನೆ ಸಂಭವಿಸಿದೆ.

Five devotees  died
Five devotees died

By

Published : Oct 16, 2021, 8:25 AM IST

ಲಖನೌ, ಜೈಪುರ:ರಾಜಸ್ಥಾನದ ಧೋಲ್‌ಪುರದಲ್ಲಿ ದುರ್ಗಾ ಮೂರ್ತಿ ನಿಮಜ್ಜನ ವೇಳೆ ಆಗ್ರಾ ಮೂಲದ ಐವರು ಪಾರ್ವತಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ದುರ್ಗಾ ಮೂರ್ತಿಯನ್ನು ನಿಮಜ್ಜನ ಮಾಡಲು ತೆರಳಿದಾಗ ಈ ದುರ್ಘಟನೆ ಸಂಭವಿಸಿದ್ದು, ಮೃತರು ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಭಾವನಪುರ ಗ್ರಾಮದ ನಿವಾಸಿಗಳು ಎಂದು ಆಗ್ರಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮುನಿರಾಜ್ ಹೇಳಿದ್ದಾರೆ.

ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈಗಾಗಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಐವರ ಶವಗಳನ್ನು ನದಿಯಿಂದ ಹೊರತೆಗೆದಿದ್ದಾರೆ.

ABOUT THE AUTHOR

...view details