ಜೌನ್ಪುರ (ಉತ್ತರಪ್ರದೇಶ):ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿರುವ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಮನೆಯ ಕುಟುಂಬಸ್ಥರು ನಿದ್ರೆ ಮಾಡ್ತಿದ್ದ ವೇಳೆ ಏಕಾಏಕಿ ಕಟ್ಟಡ ಕುಸಿತ ಕಂಡಿರುವ ಪರಿಣಾಮ ಈ ಘಟನೆ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ, ಕೆಲವರನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜಿಲ್ಲಾಧಿಕಾರಿ ಮನೀಷ್ ಕುಮಾರ್ ವರ್ಮಾ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಸೈನಿ ಸೇರಿದಂತೆ ಅನೇಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.