ಕಂಕೇರ್(ಛತ್ತೀಸ್ಗಡ): ಕಂಕೇರ್ ಜಿಲ್ಲೆಯಲ್ಲಿ ಭಾನುವಾರ ಮಧ್ಯರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ತಂದೆ-ತಾಯಿ ಮತ್ತು ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಮಳೆಯಿಂದಾಗಿ ತುಂಬಿದ್ದ ನದಿ ದಾಟಿ ಸ್ಥಳಕ್ಕೆ ತೆರಳಲು ಪೊಲೀಸರು ಸಾಕಷ್ಟು ಹರಸಾಹಸಪಟ್ಟರು. ಗೋಡೆ ಕುಸಿದ ವೇಳೆ ಎಲ್ಲರೂ ಮನೆಯಲ್ಲಿ ಮಲಗಿದ್ದರು ಎಂದು ಹೇಳಲಾಗುತ್ತಿದೆ.
48 ಗಂಟೆ ನಿರಂತರ ಮಳೆ: ಕಂಕೇರ್ ಜಿಲ್ಲೆಯಲ್ಲಿ ಕಳೆದ 48 ಗಂಟೆಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದಾಗಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಬ್ಲಾಕ್ ಮತ್ತು ಜಿಲ್ಲಾ ಕೇಂದ್ರದಿಂದ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಕವರ್ಧಾದಲ್ಲಿ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದಾಳೆ.