ಶಿಮ್ಲಾ(ಹಿಮಾಚಲ ಪ್ರದೇಶ):ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಹಿಮಪಾತವಾಗ್ತಿದ್ದು, ಅಲ್ಲಿನ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಇದೇ ಕಾರಣದಿಂದಾಗಿ ಇದೀಗ ಒಂದೇ ಕುಟುಂಬದ ಐವರು ಶಿಮ್ಲಾದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಕುಪ್ವಿಯಲ್ಲಿ ಭೀಕರ ಹಿಮಪಾತವಾಗಿರುವ ಕಾರಣ, ಕಾರು ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ದುರ್ಘಟನೆಯಲ್ಲಿ ಒಂದೇ ಕುಟುಂಬದ ಐವರು ಅಸುನೀಗಿದ್ದಾರೆ. ಇದರಲ್ಲಿ ಓರ್ವ ಮಗುವಿನ ಪ್ರಾಣ ರಕ್ಷಣೆ ಮಾಡಲಾಗಿದೆ.
ಇದನ್ನೂ ಓದಿ:ಬಿಜೆಪಿ ನಮಗೆ 8-10 ಸ್ಥಾನ ನೀಡದಿದ್ದರೆ ಯುಪಿಯಲ್ಲಿ ಸ್ವತಂತ್ರ ಸ್ಪರ್ಧೆ: ಕೇಂದ್ರ ಸಚಿವ ಅಠವಾಳೆ
ಘಟನೆ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಸ್ಥಳೀಯರು ಮತ್ತು ಪೊಲೀಸರು ಕಾರಿನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ. ಇಂದು ಸಂಜೆ 6:15ರ ವೇಳೆಗೆ ಈ ದುರ್ಘಟನೆ ನಡೆದಿದೆ. ಸಾವನ್ನಪ್ಪಿದವರಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಒಂದು ಮಗು ಸೇರಿದೆ.
ನಿನ್ನೆ ಸಂಜೆ ಕೂಡ ಶಿಮ್ಲಾ ಸಮೀಪದ ಹಸನ್ ಕಣಿವೆ ಬಳಿ ಕಂದಕಕ್ಕೆ ಕಾರು ಬಿದ್ದ ಕಾರಣ ಇಬ್ಬರು ಗಾಯಗೊಂಡಿದ್ದರು.