ಜೈಪುರ(ರಾಜಸ್ಥಾನ):ಪೊಲೀಸ್ ವಾಹನವೊಂದು ಅಪಘಾತಕ್ಕೀಡಾಗಿದ್ದು, ನಾಲ್ವರು ಪೊಲೀಸರು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
ಆರೋಪಿಯೊಬ್ಬನನ್ನು ದೆಹಲಿಯಿಂದ ಗುಜರಾತ್ ಕರೆತರುತ್ತಿದ್ದ ಗುಜರಾತ್ ಪೊಲೀಸರ ಫಾರ್ಚೂನರ್ ಕಾರು ಭಬ್ರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಕ್ಕೀಡಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.