ಪುಣೆ(ಮಹಾರಾಷ್ಟ್ರ):ಭೀಕರ ಕಾರು ಅಪಘಾತದಲ್ಲಿ ಐವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಪುಣೆ ಮುಂಬೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಎದುರಿಗೆ ಬಂದ ವಾಹನಕ್ಕೆ ರಭಸವಾಗಿ ಗುದ್ದಿದ್ದು ಅಪಘಾತಕ್ಕೆ ಕಾರಣವಾಗಿದೆ.
8 ಜನರೊಂದಿಗೆ ಮುಂಬೈಗೆ ತೆರಳುತ್ತಿದ್ದ ಕಾರು ಪುಣೆ- ಎಕ್ಸ್ಪ್ರೆಸ್ವೇಯಲ್ಲಿ ಅತಿ ವೇಗವಾಗಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬಂದ ವಾಹನಕ್ಕೆ ಗುದ್ದಿದ್ದಾರೆ. ಇದರಿಂದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿದ್ದವರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.