ಕರ್ನಾಟಕ

karnataka

ETV Bharat / bharat

ಕುಲ್ಗಾಮ್ ಎನ್‌ಕೌಂಟರ್‌: ಐವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ - ಎಸ್‌ಎಸ್‌ಪಿ ಕುಲ್ಗಾಮ್

Kulgam encounter: ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

Etv Bharat
Etv Bharat

By ETV Bharat Karnataka Team

Published : Nov 17, 2023, 12:47 PM IST

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಸಾಮ್ನೂ ಗ್ರಾಮದಲ್ಲಿ ಇಂದು (ಗುರುವಾರ) ನಡೆದ ಎನ್‌ಕೌಂಟರ್‌ನಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಕುಲ್ಗಾಮ್ ಮತ್ತು ಸುತ್ತನ ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಭಯೋತ್ಪಾದಕರ ಗುರುತಿಸುವಿಕೆ ಮತ್ತು ನಂಟಿನ ಕುರಿತು ತನಿಖೆ ಮಾಡಲಾಗುವುದು ಎಂದು ಭದ್ರತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಕುಲ್ಗಾಮ್‌ನ ಸಾಮ್ನೋ ಗ್ರಾಮವನ್ನು ಸುತ್ತುವರಿದು ದೊಡ್ಡ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಿವೆ. ಮಾಹಿತಿ ಮೇರೆಗೆ ಶಂಕಿತ ಉಗ್ರರಿದ್ದ ಸ್ಥಳಕ್ಕೆ ತೆರಳುತ್ತಿದ್ದಂತೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಮನಬಂದಂತೆ ಗುಂಡು ಹಾರಿಸಿದ್ದಾರೆ. ಇದಕ್ಕುತ್ತರವಾಗಿ ಭದ್ರತಾಪಡೆಗಳು ಪ್ರತಿದಾಳಿ ನಡೆಸಿವೆ. ಗುಂಡಿನ ಚಕಮಕಿಯಲ್ಲಿ ಐವರು ಅಪರಿಚಿತ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಈ ಕುರಿತು ಮೊದಲೇ ಕಾಶ್ಮೀರ ವಲಯ ಪೊಲೀಸರು 'ಎಕ್ಸ್' ಪೋಸ್ಟ್​ನಲ್ಲಿ, ಕುಲ್ಗಾಮ್‌ನ ಸಾಮ್ನೋ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯುತ್ತಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಶೋಧ ಕಾರ್ಯಚರಣೆಯಲ್ಲಿ ನಿರತವಾಗಿವೆ. ಈ ಕುರಿತು ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಕೆಲವು ದಿನಗಳ ಹಿಂದೆ ಪುಲ್ವಾಮಾದ ಪರಿಗಾಮ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದರು.

ಇದನ್ನೂ ಓದಿ:ಕಾಶ್ಮೀರದ ಉರಿ ಸೆಕ್ಟರ್​ನಲ್ಲಿ ಇಬ್ಬರು ಉಗ್ರರ ಹತ್ಯೆ

ABOUT THE AUTHOR

...view details