ಅಹಮದಾಬಾದ್: ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆ ಮತ್ತು ಪ್ರವಾಹಕ್ಕೆ 61 ಜನರು ಮೃತಪಟ್ಟಿದ್ದಾರೆ. ಗುಜರಾತ್, ದಕ್ಷಿಣ ಗುಜರಾತ್ ಮತ್ತು ಸೌರಾಷ್ಟ್ರದಲ್ಲಿ ಪ್ರವಾಹದಿಂದ ಹೆಚ್ಚು ಹಾನಿಯಾಗಿದೆ. ಸರ್ಕಾರದ ಮಾಹಿತಿ ಪ್ರಕಾರ, ಗುಜರಾತ್‌ನಲ್ಲಿ ಮಳೆಯಿಂದ 10 ಸಾವಿರಕ್ಕೂ ಹೆಚ್ಚು ಜನ ಸಂತ್ರಸ್ತರಾಗಿದ್ದು, ಅವರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ.
ಸೋಮವಾರ ಸಂಜೆ 6 ಗಂಟೆಯವರೆಗೆ ರಾಜ್ಯದಲ್ಲಿ ಮಳೆಯಿಂದಾಗಿ 10,700 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಈ ಸಂಬಂಧ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, ಗುಜರಾತ್‌ನ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿರುವ ಈ ಸಂದರ್ಭದಲ್ಲಿ ನಾನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಜೀ ಅವರೊಂದಿಗೆ ಮಾತನಾಡಿದ್ದೇನೆ. ಮೋದಿ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವ ಭರವಸೆ ನೀಡಿದ್ದೇನೆ ಎಂದಿದ್ದಾರೆ.
ಗುಜರಾತ್ ಆಡಳಿತ, ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಸಂತ್ರಸ್ತ ಜನರಿಗೆ ತ್ವರಿತ ನೆರವು ನೀಡುವಲ್ಲಿ ತೊಡಗಿವೆ. ಗುಜರಾತ್‌ನಲ್ಲಿ ನರ್ಮದಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಕಾರಣದಿಂದಾಗಿ ಕರ್ಜನ್ ಅಣೆಕಟ್ಟಿನ 9 ಗೇಟ್‌ಗಳನ್ನು ತೆರೆಯಲಾಗಿದೆ.
ಈ 9 ಗೇಟ್ಗಳಿಂದ 2 ಲಕ್ಷ 10 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಭರೂಚ್ ಮತ್ತು ನರ್ಮದಾ ಜಿಲ್ಲೆಗಳ ತಗ್ಗು ಪ್ರದೇಶಗಳಿಗೆ ಎಚ್ಚರಿಕೆ ನೀಡಲಾಗಿದೆ. ಭರೂಚ್‌ನ 12 ಗ್ರಾಮಗಳು ಮತ್ತು ನರ್ಮದೆಯ 8 ಗ್ರಾಮಗಳನ್ನು ಅಲರ್ಟ್ ಮೋಡ್‌ನಲ್ಲಿ ಇರಿಸಲಾಗಿದೆ. ಪ್ರವಾಹದಿಂದಾಗಿ ಇಲ್ಲಿ ಪರಿಸ್ಥಿತಿ ಹದಗೆಡುವ ನಿರೀಕ್ಷೆಯಿದೆ.