ಪುದುಚೇರಿ:ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಇಂದು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ತಮಿಳ್ಸಾಯಿ ಸೌಂದರರಾಜನ್ ನಿರ್ದೇಶನದಂತೆ ಮುಖ್ಯಮಂತ್ರಿ ನಾರಾಯಣಸ್ವಾಮಿ ಬಹುಮತ ಸಾಬೀತು ಪಡಿಸಬೇಕಿದೆ.
ಪುದುಚೇರಿ ರಾಜಕೀಯ ಬಿಕ್ಕಟ್ಟು: ಇಂದು ಸಿಎಂ ನಾರಾಯಣಸ್ವಾಮಿ ವಿಶ್ವಾಸಮತ ಯಾಚನೆ - ಪುದುಚೇರಿ ಸುದ್ದಿ
ಲೆಫ್ಟಿನೆಂಟ್ ಗವರ್ನರ್ ತಮಿಳ್ಸಾಯಿ ಸೌಂದರ್ರಾಜನ್ ನಿರ್ದೇಶನದಂತೆ ಪುದುಚೇರಿ ಸಿಎಂ ನಾರಾಯಣಸ್ವಾಮಿ ವಿಧಾನಸಭೆಯಲ್ಲಿ ಇಂದು ಬಹುಮತ ಸಾಬೀತುಪಡಿಸಬೇಕಿದೆ.
ಇಬ್ಬರು ಕಾಂಗ್ರೆಸ್ ಶಾಸಕರಾದ ಎ. ಜಾನ್ ಕುಮಾರ್, ಲಕ್ಷ್ಮಿ ನಾರಾಯಣನ್ ಮತ್ತು ಡಿಎಂಕೆ ಶಾಸಕ ಕೆ ವೆಂಕಟೇಶನ್ ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಂತರ ರಾಜಕೀಯ ಬಿಕ್ಕಟ್ಟು ಉದ್ಭವಿಸಿದೆ. ಇನ್ನು ಬಹುಮತ ಸಾಬೀತು ಕುರಿತಂತೆ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಮತ್ತು ಡಿಎಂಕೆ ಶಾಸಕರೊಂದಿಗೆ ಸಾಕಷ್ಟು ಚರ್ಚೆ ನಡೆಸಿದ್ದಾರೆ. 33 ಶಾಸಕರನ್ನು ಹೊಂದಿರುವ ಪುದುಚೇರಿ ವಿಧಾನಸಭೆಯಲ್ಲಿ ಇದೀಗ ಆಡಳಿತ ಪಕ್ಷದ ಸದಸ್ಯರ ಸಂಖ್ಯೆ 11 ಕ್ಕೆ ಕುಸಿದಿದೆ. ಆದರೆ ವಿರೋಧ ಪಕ್ಷದ ಶಾಸಕರ ಸಂಖ್ಯೆ 14 ಇದೆ. ಇದೇ ಕಾರಣಕ್ಕಾಗಿ ಬಹುಮತ ಸಾಬೀತುಪಡಿಸುವಂತೆ ನೂತನ ಲೆಪ್ಟಿನೆಂಟ್ ಗವರ್ನರ್ ಆದೇಶ ನೀಡಿದ್ದಾರೆ.
ಇನ್ನು ಈ ವರ್ಷದ ಕೊನೆಯಲ್ಲಿ ಪುದುಚೇರಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ದಿನಾಂಕ ಇನ್ನೂ ಘೋಷಣೆಯಾಗಿಲ್ಲ.