ನವದೆಹಲಿ:ದೇಶದ ಮೊದಲ ಅಂತಾರಾಷ್ಟ್ರೀಯ ಹಣಕಾಸು ಸೇವಾ ಕೇಂದ್ರದ (Country’s First International Financial Services Centre -IFSC) ಅಭಿವೃದ್ಧಿ ಮತ್ತು ಬೆಳವಣಿಗೆ ಕುರಿತು ಚರ್ಚಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಗುಜರಾತ್ನ ಗಾಂಧಿ ನಗರದಲ್ಲಿರುವ 'ಗಿಫ್ಟ್ ಸಿಟಿ'ಗೆ ( Nirmala Sitharaman to visit GIFT City) ಹಣಕಾಸು ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಏಳು ಉನ್ನತ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಲಿದ್ದಾರೆ.
ಗುಜರಾತ್ ಇಂಟರ್ನ್ಯಾಶನಲ್ ಫೈನಾನ್ಸ್ ಟೆಕ್ -ಸಿಟಿ (GIFT City -Gujarat International Finance Tec-City)ಗೆ ಬರುವ ಸೀತಾರಾಮನ್ಗೆ ಹಣಕಾಸು ಕಾರ್ಯದರ್ಶಿ ಟಿ.ವಿ.ಸೋಮನಾಥನ್, ಕಂದಾಯ ಕಾರ್ಯದರ್ಶಿ ತರುಣ್ ಬಜಾಜ್, ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಅಜಿತ್ ಸೇಠ್ ಸೇರಿದಂತೆ 7 ಅಧಿಕಾರಿಗಳು ಸಾಥ್ ನೀಡಲಿದ್ದಾರೆ.