ರಾಂಚಿ: ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್ ಫೆಬ್ರವರಿ 19 ಕ್ಕೆ ಮುಂದೂಡಿದೆ.
1992 – 93ರಲ್ಲಿ ಚಾಯಿಬಾಸಾ ಖಜಾನೆಯಿಂದ ₹33.67 ಕೋಟಿ ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಅಧ್ಯಕ್ಷ ಲಾಲು ಸೇರಿದಂತೆ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆ ಅವಧಿಯಲ್ಲಿ ಲಾಲು ಅವರೇ ಬಿಹಾರದ ಮುಖ್ಯಮಂತ್ರಿ ಆಗಿದ್ದರು. ಈಗಾಗಲೇ ಲಾಲು ಅವರ ವಿರುದ್ಧ 4 ಕೇಸ್ಗಳು ದಾಖಲಾಗಿದ್ದು, ಅದರಲ್ಲಿ 3ಕ್ಕೆ ಜಾಮೀನು ದೊರೆತಿದೆ.
ಇದನ್ನು ಓದಿ: ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ಕಣ್ಣೂರು ಪಂಚಾಯಿತಿ ಬಿಜೆಪಿ ತೆಕ್ಕೆಗೆ
ಈ ಮಧ್ಯೆ, ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಮುಖ್ಯಸ್ಥ ಲಾಲೂ ಯಾದವ್ ಅವರ ಹಿರಿಯ ಪುತ್ರ ಮತ್ತು ಪಕ್ಷದ ಶಾಸಕ ತೇಜ್ ಪ್ರತಾಪ್ ಯಾದವ್ ಅವರು, ಬಿಹಾರ ಮಾಜಿ ಮುಖ್ಯಮಂತ್ರಿಯನ್ನು ಮಾನವೀಯ ನೆಲೆಯಲ್ಲಿ ಜೈಲಿನಿಂದ ಬಿಡುಗಡೆ ಮಾಡುವಂತೆ ಕೋರಿ 50,000 ಪೋಸ್ಟ್‌ಕಾರ್ಡ್ ಪತ್ರಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದಾರೆ.
ಲಾಲೂ ಪ್ರಸಾದ್ ಯಾದವ್ ಅವರನ್ನು ರಾಜ್ಯ ವೈದ್ಯಕೀಯ ಮಂಡಳಿಯ ಸಲಹೆಯ ಮೇರೆಗೆ ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ದಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ದೆಹಲಿಗೆ ಸ್ಥಳಾಂತರಿಸಲಾಗಿದೆ.