ಪಣಜಿ (ಗೋವಾ):ಸೋನಾಲಿ ಫೋಗಟ್ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಕರ್ಲಿಸ್ ಕ್ಲಬ್ ಮಾಲೀಕ ಎಡ್ವಿನ್ ನೂನಿಸ್ ಮತ್ತು ಡ್ರಗ್ ಪೆಡ್ಲರ್ ದತ್ತಪ್ರಸಾದ್ ಗಾಂವ್ಕರ್ ಅವರನ್ನು ಬಂಧಿಸಿದ್ದಾರೆ. ತನಿಖೆ ಮುಗಿಯುವ ವರೆಗೆ ಕರ್ಲಿಸ್ ಬಾರ್ ಬೀಗ ಹಾಕಿದ್ದಾರೆ.
ಸೋನಾಲಿ ಫೋಗಟ್ ಸಾವಿಗೆ ಮಾದಕ ದ್ರವ್ಯ ಸೇವನೆಯೇ ಕಾರಣ ಎಂದು ಗೋವಾ ಪೊಲೀಸರು ತಿಳಿಸಿದ್ದಾರೆ. ಮೃತದೇಹದ ಮೇಲೆ ಅನೇಕ ಗಾಯದ ಗುರುತುಗಳಿರುವುದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ನಿನ್ನೆ ಬಯಲಾಗಿತ್ತು. ಹೀಗಾಗಿ ಪೊಲೀಸರು ಇದೊಂದು ಕೊಲೆ ಎಂಬ ತೀರ್ಮಾನಕ್ಕೆ ಬಂದು ಗುರುವಾರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿ ಸುಧೀರ್ ಸಾಂಗ್ವಾನ್ ಮತ್ತು ಅವರ ಸಹವರ್ತಿ ಸುಖ್ವಿಂದರ್ ಸಿಂಗ್ ಅವರು ಕ್ಲಬ್‌ನಲ್ಲಿ ಸೋನಾಲಿ ಫೋಗಟ್ ಜೊತೆ ಪಾರ್ಟಿ ಮಾಡುತ್ತಿರುವುದು ಕಂಡುಬಂದಿದೆ. ಅವರಲ್ಲಿ ಓರ್ವರು ಸೋನಾಲಿಗೆ ಬಲವಂತವಾಗಿ ಏನೋ ಸೇವಿಸಿರುವುದು ಗೊತ್ತಾಗಿದೆ ಎಂದು ಐಜಿಪಿ ಓಂವಿರ್ ಸಿಂಗ್ ಬಿಷ್ಣೋಯ್ ತಿಳಿಸಿದ್ದಾರೆ.
ಆರೋಪಿಗಳಾದ ಸುಖ್ವಿಂದರ್ ಮತ್ತು ಸುಧೀರ್ ಉದ್ದೇಶಪೂರ್ವಕವಾಗಿ ಪಾನೀಯದಲ್ಲಿ ಡ್ರಗ್ಸ್ ಬೆರೆಸಿ ಅದನ್ನು ಕುಡಿಯುವಂತೆ ಒತ್ತಾಯಿಸಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಐಜಿಪಿ ಮಾಹಿತಿ ನೀಡಿದರು.