ಮಲಪ್ಪುರಂ(ಕೇರಳ): ಫುಟ್ಬಾಲ್ ಪಂದ್ಯಾವಳಿ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿದು ಬಿದ್ದು, ಸುಮಾರು 200ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂನಲ್ಲಿ ರವಿವಾರ ರಾತ್ರಿ ನಡೆದಿದೆ. ಇದರಲ್ಲಿ ಗಂಭೀರ ಸ್ಥಿತಿಯಲ್ಲಿರುವ 15 ಮಂದಿ ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇಲ್ಲಿನ ವಂದೂರನ ಪೂಂಗೋಡು ಮೈದಾನದಲ್ಲಿ ರಾತ್ರಿ ಫುಟ್ಬಾಲ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ರಾತ್ರಿ 9.30ರ ಅಂದಾಜು ಒಂದು ಸಾವಿರ ಪ್ರೇಕ್ಷಕರಿದ್ದ ಗ್ಯಾಲರಿ ದಿಢೀರ್ ಕುಸಿದು ಬಿದ್ದಿದೆ. ಬಿದಿರುಗಳಿಂದ ಗ್ಯಾಲರಿ ಕಟ್ಟಲಾಗಿತ್ತು. ಆದರೆ, ಕಳೆದ ಎರಡು ದಿನಗಳಿಂದ ಮಳೆ ಸುರಿದಿದ್ದರಿಂದ ಮುರಿದು ಬಿದ್ದಿದೆ ಎನ್ನಲಾಗಿದೆ.