ನವದೆಹಲ್ಲಿ:ಭಾರತದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ಕೋವಿಡ್ ಲಸಿಕೆ ಪಡೆಯಲು ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರದಿಂದ ಅವಕಾಶ ನೀಡಿದೆ.
ಕೋವಿಡ್ ಲಸಿಕೆ ಪಡೆಯಲು ಕೋವಿನ್(CoWin) ಪೋರ್ಟಲ್‌ನಲ್ಲಿ ನೋಂದಣಿ ಮಾಡಬೇಕಾಗುತ್ತದೆ. ಈ ಪೋರ್ಟಲ್‌ನಲ್ಲಿ ವಿದೇಶಿ ಪ್ರಜೆಗಳು ತಮ್ಮ ಪಾಸ್‌ಪೋರ್ಟ್ ಅನ್ನು ಗುರುತಿನ ಪುರಾವೆಯಾಗಿ ಬಳಸಬಹುದು ಎಂದು ಸಚಿವಾಲಯ ಹೇಳಿದೆ.
ಸಾಕಷ್ಟು ಮಂದಿ ವಿದೇಶಿ ಪ್ರಜೆಗಳು ಭಾರತದಲ್ಲಿ ವಾಸಿಸುತ್ತಿದ್ದಾರೆ. ವಿಶೇಷವಾಗಿ ಮಹಾನಗರಗಳಲ್ಲಿ ಇವರ ಸಂಖ್ಯೆ ಹೆಚ್ಚಿದೆ. ಈ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಹರಡುವಿಕೆಯ ಪ್ರಮಾಣ ಅಲ್ಲಿನ ಜನಸಾಂದ್ರತೆಯಿಂದ ಹೆಚ್ಚಾಗಿರುತ್ತದೆ. ಆದ್ದರಿಂದಾಗಿ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವುದು ಅತ್ಯಂತ ಅನಿವಾರ್ಯ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ.