ಕರ್ನಾಟಕ

karnataka

ETV Bharat / bharat

ಪದ್ಮಭೂಷಣ ಪ್ರಶಸ್ತಿ ತಿರಸ್ಕರಿಸಿದ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ - ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ

ಪದ್ಮಭೂಷಣ ಪ್ರಶಸ್ತಿಗೆ ಹೆಸರಿಸಿರುವುದು ತನಗೆ ತಿಳಿದಿಲ್ಲ, ಹೀಗಾಗಿ ಅದನ್ನು ನಾನು ತಿರಸ್ಕರಿಸುತ್ತೇನೆ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಹೇಳಿದ್ದಾರೆ.

Former Bengal CM Buddhadeb Bhattacharjee rejects Padma Bhushan
ಪದ್ಮಭೂಷಣ ಪ್ರಶಸ್ತಿ ತಿರಸ್ಕರಿಸಿದ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ

By

Published : Jan 25, 2022, 11:40 PM IST

ನವದೆಹಲಿ:2022ರ ಪದ್ಮಭೂಷಣ ಪ್ರಶಸ್ತಿ ಘೋಷಿಸಲ್ಪಟ್ಟ ಬೆನ್ನಲ್ಲೇ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ಪ್ರಶಸ್ತಿಯನ್ನು ತಿರಸ್ಕರಿಸುವುದಾಗಿ ಹೇಳಿದ್ದಾರೆ. ಪದ್ಮಭೂಷಣ ಪ್ರಶಸ್ತಿಗೆ ಹೆಸರಿಸಿರುವುದು ತನಗೆ ತಿಳಿದಿಲ್ಲ, ಹೀಗಾಗಿ ಅದನ್ನು ನಾನು ತಿರಸ್ಕರಿಸುತ್ತೇನೆ ಎಂದಿದ್ದಾರೆ.

ಬುದ್ಧದೇವ್ ಭಟ್ಟಾಚಾರ್ಯ ಅವರು 2000ರಿಂದ 2011ರವರೆಗೆ ಪಶ್ಚಿಮ ಬಂಗಾಳದ ಸಿಎಂ ಆಗಿ ಸೇವೆ ಸಲ್ಲಿಸಿದ್ದಾರೆ. ನಾಳಿನ 73ನೇ ಗಣರಾಜ್ಯೋತ್ಸವಕ್ಕೂ ಮುನ್ನಾದಿನವಾದ ಇಂದು ಭಾರತ ಸರ್ಕಾರವು ಘೋಷಿಸಿದ 17 ಮಂದಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಲ್ಲಿ ಭಟ್ಟಾಚಾರ್ಯ ಅವರೂ ಸೇರಿದ್ದರು. ಗುಲಾಂ ನಬಿ ಆಜಾದ್ ಅವರನ್ನು ಹೊರತುಪಡಿಸಿ, ಪದ್ಮವಿಭೂಷಣ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಇಬ್ಬರು ಪ್ರತಿಪಕ್ಷದ ನಾಯಕರಲ್ಲಿ ಅವರು ಒಬ್ಬರಾಗಿದ್ದರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಈ ಬಗ್ಗೆ ಟ್ವೀಟ್​ ಮಾಡಿರುವ ಸಿಪಿಎಂ, ಪದ್ಮಭೂಷಣ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಬುದ್ಧದೇವ್ ಭಟ್ಟಾಚಾರ್ಯ ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಪ್ರಶಸ್ತಿಗಳನ್ನು ನಿರಾಕರಿಸುವ ವಿಚಾರದಲ್ಲಿ ಸಿಪಿಐ(ಎಂ) ನಿಲುವು ಸ್ಥಿರವಾಗಿದೆ. ನಾವು ಕೆಲಸ ಮಾಡುವುದು ಜನರಿಗಾಗಿಯೇ ಹೊರತು, ಪ್ರಶಸ್ತಿಗಾಗಿ ಅಲ್ಲ. ಈ ಹಿಂದೆ ಕೂಡ ಅವರು ಪ್ರಶಸ್ತಿಯೊಂದನ್ನು ನಿರಾಕರಿಸಿದ್ದರು ಎಂದು ​ಹೇಳಿದೆ.

ಮಹಾಮಾರಿ ಕೊರೊನಾ ಲಸಿಕೆ ಕಂಡುಹಿಡಿದಿರುವ ಭಾರತ್ ಬಯೋಟೆಕ್​ನ ಮುಖ್ಯಸ್ಥ ಡಾ. ಕೃಷ್ಣ ಎಲ್ಲಾ ಹಾಗೂ ಅವರ ಪತ್ನಿ ಸುಚಿತ್ರ ಎಲ್ಲಾ ಅವರಿಗೂ ಪದ್ಮಭೂಷಣ ಗರಿ ಒಲಿದಿದೆ. ಇವರ ಜೊತೆಗೆ ಸೀರಂ ಸಂಸ್ಥೆಯ ಸಂಸ್ಥಾಪಕರಾದ ಸೈರಸ್ ಪೂನಾವಾಲ, ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ, ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಅವರಿಗೂ ಪದ್ಮಭೂಷಣ ಪ್ರಶಸ್ತಿ ಒಲಿದಿದೆ.

ಇದನ್ನೂ ಓದಿರಿ: ದಲಿತ ಕವಿ ದಿ. ಸಿದ್ದಲಿಂಗಯ್ಯ ಸೇರಿ ಕರ್ನಾಟಕದ ಐವರಿಗೆ ಪದ್ಮಶ್ರೀ ಪುರಸ್ಕಾರ

ABOUT THE AUTHOR

...view details