ಕೋಲ್ಕತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ 77 ವರ್ಷದ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಕೊರೊನಾ ದೃಢಪಟ್ಟಿದ್ದು, ಮನೆಯಲ್ಲಿ ಪ್ರತ್ಯೇಕವಾಗಿರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ಖಚಿತಪಡಿಸಿವೆ.
ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯಗೆ ಕೋವಿಡ್ ದೃಢ - Former Bengal CM Buddhadeb Bhattacharya news
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯಗೆ ಕೋವಿಡ್ ದೃಢ
ಪತ್ನಿ ಮೀರಾ ಭಟ್ಟಾಚಾರ್ಯ ಕೂಡ ಕೊರೊನಾ ಸೋಂಕಿತರಾಗಿದ್ದು, ಅವರನ್ನು ಮಂಗಳವಾರ ಸಂಜೆ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಯಲ್ಲಿ ಮೀರಾ ಭಟ್ಟಾಚಾರ್ಯ ಅವರ ಚಿಕಿತ್ಸೆಗೆ ವೈದ್ಯರ ತಂಡವನ್ನು ರಚಿಸಲಾಗಿದೆ. ಹೋಂ ಐಸೋಲೇಷನ್ನಲ್ಲಿರುವ ಭಟ್ಟಾಚಾರ್ಯ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರು ನಿರಂತರವಾಗಿ ಗಮನ ಹರಿಸುತ್ತಿದ್ದಾರೆ.