ನವದೆಹಲಿ: ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಉಚ್ಛಾಟಿತ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಬಂಧನದಿಂದ ತಡೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು, ಇದರ ವಿಚಾರಣೆ ನಾಳೆ ನಡೆಯಲಿದೆ.
ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಕಟುವಾಗಿ ಪ್ರತಿಕ್ರಿಯೆ ನೀಡಿದ ನಂತರ ಮೇಲಿಂದ ಮೇಲೆ ಬೆದರಿಕೆ ಬರತೊಡಗಿವೆ. ಇದರ ಬೆನ್ನಲ್ಲೇ ಬಂಧನದಿಂದ ರಕ್ಷಣೆ ನೀಡುವಂತೆ ಕೋರಿ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ತಮಗೆ ಜೀವ ಬೆದರಿಕೆ ಮತ್ತು ಅತ್ಯಾಚಾರ ಬೆದರಿಕೆಗಳು ಬಂದಿವೆ ಎಂದು ಆರೋಪಿಸಿದ್ದಾರೆ.