ಲಖನೌ(ಉತ್ತರಪ್ರದೇಶ): ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಸ್‌ಜಿಪಿಜಿಐ)ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಯುಪಿ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಸ್ಥಿತಿ ಗಂಭೀರವಾಗಿದೆ. ಕಳೆದ 51 ದಿನಗಳಿಂದ ಕಲ್ಯಾಣ್ಸಿಂಗ್ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿರುವ ಹಿನ್ನೆಲೆ ಇಂದು ಸಿಎಂ ಯೋಗಿ ಆದಿತ್ಯನಾಥ್ ಆಸ್ಪತ್ರೆಗೆ ಭೇಟಿ ನೀಡಿ, ಕಲ್ಯಾಣ್ಸಿಂಗ್ರನ್ನು ನೋಡಿದ್ದಾರೆ. ಬಳಿಕ ಸಿಎಂ, ಆಸ್ಪತ್ರೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.