ನವದೆಹಲಿ :ಕಾಶ್ಮೀರಿ ಪಂಡಿತರ ಹತ್ಯಾಕಾಂಡ ನಡೆದ ಕುರಿತು ನಿರ್ಮಿಸಲಾದ ದಿ ಕಾಶ್ಮೀರ ಫೈಲ್ಸ್ ಸಿನಿಮಾದ ಬಗ್ಗೆ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಆಕ್ಷೇಪಿಸಿದ್ದಾರೆ. ಅಲ್ಲದೇ, ಸಿನಿಮಾಗೆ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ತೆರಿಗೆ ವಿನಾಯ್ತಿ ನೀಡಿದ್ದರ ಬಗ್ಗೆಯೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿರುವ ದಿ ಕಾಶ್ಮೀರ ಫೈಲ್ಸ್ ಸಿನಿಮಾವನ್ನು ಪ್ರತಿಯೊಬ್ಬರೂ ನೋಡಬೇಕು ಎಂದು ಕರೆ ನೀಡಲಾಗುತ್ತಿದೆ. ಬಿಜೆಪಿ ನೇತೃತ್ವದ ಸರ್ಕಾರಗಳು ಸಿನಿಮಾ ಪ್ರದರ್ಶನಕ್ಕೆ ತೆರವಿಗೆ ವಿನಾಯಿತಿ ನೀಡಿವೆ. ಇದು ಜನರಲ್ಲಿ ದ್ವೇಷ ಭಾವನೆ ಮೂಡಿಸುವ ಉದ್ದೇಶ ಎಂದು ಆರೋಪಿಸಿದ್ದಾರೆ.
ಅಂದು ನಡೆದ ದುರಂತದ ಬಗ್ಗೆ ನನಗೂ ವಿಷಾದವಿದೆ. ಆದರೆ, ದಿ ಕಾಶ್ಮೀರ ಫೈಲ್ಸ್ ಸಿನಿಮಾ ಕೇವಲ ಪ್ರಚಾರಕ್ಕಾಗಿ ಮಾಡಿದ್ದಾಗಿದೆ. ಅಂದಿನ ಘಟನೆಗೆ ಜನಾಂಗೀಯ ಭಾವನೆ ಹೊಂದಿದ್ದ ರಾಜಕೀಯ ಪಕ್ಷ, ಸಂಘಟನೆಗಳ ಕೈವಾಡದಿಂದ ನಡೆದಿದೆ. ಇದರಲ್ಲಿ ನನ್ನ ಪಾತ್ರ ಏನೂ ಇಲ್ಲ ಎಂದು ಹೇಳಿಕೊಂಡಿದ್ದಾರೆ.