ಕೋಲ್ಕತ್ತಾ:ಕಾಂಗ್ರೆಸ್ ಪಕ್ಷದ ಮಾಜಿ ಸಂಸದೆ ಸುಶ್ಮಿತಾ ದೇವ್ ಪಕ್ಷ ತೊರೆದಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸೇರಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಟ್ವಿಟರ್ನಲ್ಲಿ ಕಾಂಗ್ರೆಸ್ ಮಾಜಿ ಸದಸ್ಯೆ ಎಂದು ಬರೆದುಕೊಳ್ಳುವ ಮೂಲಕ ಪಕ್ಷ ಬಿಡುವ ಮುನ್ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಸೋನಿಯಾಗೆ ಬರೆದ ಪತ್ರದಲ್ಲಿ ಏನಿದೆ?
ಕಾಂಗ್ರೆಸ್ ಪಕ್ಷ ತೊರೆಯಲು ಯಾವುದೇ ರೀತಿಯ ಕಾರಣವಿಲ್ಲ. ಕಳೆದ ಮೂರು ದಶಕಗಳಿಂದ ಸೇವೆ ಸಲ್ಲಿಸಿದ್ದೇನೆ. ಜೀವನದಲ್ಲಿ ಇದೀಗ ಹೊಸ ಅಧ್ಯಾಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ: ಆಹಾರದಾಸೆಗೆ 3 ಲಕ್ಷ ಹಣವಿದ್ದ ಬ್ಯಾಗ್ ಜೊತೆ ಮರವೇರಿ ಕುಳಿತ ಮಂಗ: ಮುಂದೇನಾಯ್ತು?
ಅಸ್ಸೋಂನ ಪ್ರಭಾವಿ ಕಾಂಗ್ರೆಸ್ ನಾಯಕಿಯಾಗಿ ಗುರುತಿಸಿಕೊಂಡಿದ್ದ ಸುಶ್ಮಿತಾ ಈಗಾಗಲೇ ಮಮತಾ ಬ್ಯಾನರ್ಜಿ ಭೇಟಿ ಮಾಡಿದ್ದು, ಇದೀಗ ಟಿಎಂಸಿ ಸೇರಲಿದ್ದಾರೆ. ಸುಶ್ಮಿತಾ ದೇವ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದು, ಅಸ್ಸೋಂ ಸಿಲಿಚರ್ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿದ್ದರು.