ಚೆನ್ನೈ (ತಮಿಳುನಾಡು):ಕಳೆದ ವರ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 2009ರ ಕರ್ನಾಟಕ ಬ್ಯಾಚ್ನ ಐಎಎಸ್ ಅಧಿಕಾರಿ ಹಾಗೂ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿಸಸಿಕಾಂತ್ ಸೆಂಥಿಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ತಮಿಳುನಾಡಿನ ಕಾಂಗ್ರೆಸ್ನ ರಾಜ್ಯಾಧ್ಯಕ್ಷರಾದ ಕೆ.ಆಳಗಿರಿ, ತಮಿಳುನಾಡಿಗೆ ಎಐಸಿಸಿ ಉಸ್ತುವಾರಿಯಾದ ದಿನೇಶ್ ಗುಂಡೂರಾವ್ ಹಾಗೂ ಎಐಸಿಸಿ ಕಾರ್ಯದರ್ಶಿಗಳು ಹಾಗೂ ಹಲವು ಮುಖಂಡರ ನೇತೃತ್ವದಲ್ಲಿ ಪಕ್ಷದ ಪ್ರಧಾನ ಕಚೇರಿ ಸತ್ಯಮೂರ್ತಿ ಭವನದಲ್ಲಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್‌ಗೆ ಸೇರ್ಪಡೆಯಾದರು.