ಬೆಂಗಳೂರು/ನವದೆಹಲಿ :ಪೊಲೀಸ್ ಸೇವೆಗೆ ಸ್ವಯಂನಿವೃತ್ತಿ ಘೋಷಿಸಿರುವ ಬಿ. ಭಾಸ್ಕರ್ ರಾವ್ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷದ ದೆಹಲಿಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಮ್ಮುಖದಲ್ಲಿ ಭಾಸ್ಕರ್ ರಾವ್ ಪಕ್ಷವನ್ನು ಸೇರಿಕೊಂಡಿದ್ದಾರೆ.
ಆಮ್ ಆದ್ಮಿ ಪಕ್ಷದ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
ಈಗ ಏಳು ತಿಂಗಳ ನಂತರ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ ಅಧಿಕೃತವಾಗಿ ಆಮ್ ಆದ್ಮಿ ಪಕ್ಷ ಸೇರಿದ್ದಾರೆ..
ಆಮ್ ಆದ್ಮಿ ಪಕ್ಷ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಯಲ್ಲಿದ್ದ ಅವರು 2021ರ ಸೆಪ್ಟೆಂಬರ್ನಲ್ಲಿ ಸ್ವಯಂನಿವೃತ್ತಿ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಭಾಸ್ಕರ್ ರಾವ್ ರಾಜಕೀಯದ ಅಖಾಡಕ್ಕೆ ಇಳಿಯುತ್ತಾರೆ ಎಂದು ಸಾಕಷ್ಟು ಚರ್ಚೆಗಳು ನಡೆದಿದ್ದವು. ಈಗ ಏಳು ತಿಂಗಳ ನಂತರ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ ಅಧಿಕೃತವಾಗಿ ಆಮ್ ಆದ್ಮಿ ಪಕ್ಷ ಸೇರಿದ್ದಾರೆ.