ಮುಂಬೈ:ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರ ವಿರುದ್ಧದ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಇಂದು ಸಿಬಿಐ ಮುಂದೆ ಹಾಜರಾಗಿದ್ದರು.
ದೇಶ್ಮುಖ್ ಡಿಆರ್‌ಡಿಒ ಅತಿಥಿಗೃಹ ತಲುಪಿದ್ದು, ಕೇಂದ್ರೀಯ ತನಿಖಾ ದಳದ (ಸಿಬಿಐ) ತಂಡವು ಸಾಂತಕ್ರೂಜ್‌ನಲ್ಲಿ ಬೆಳಗ್ಗೆ 10 ಗಂಟೆಯಿಂದ ವಿಚಾರಣೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.