ಚಂಡೀಗಢ(ಪಂಜಾಬ್): ಪಂಜಾಬ್ನಲ್ಲಿ ಭಗವಂತ್ ಮಾನ್ ಸಿಂಗ್ ಸರ್ಕಾರ ಜಾರಿಗೆ ಬಂದಾಗಿನಿಂದಲೂ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ್ದು, ಕಳೆದ ಕೆಲ ದಿನಗಳ ಹಿಂದೆ ತಮ್ಮ ಸಚಿವ ಸಂಪುಟದ ಮಂತ್ರಿಯನ್ನೇ ವಜಾಗೊಳಿಸಿದ್ದರು. ಇದೀಗ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದ್ದು, ಭ್ರಷ್ಟಾಚಾರ ಪ್ರಕರಣದಲ್ಲಿ ಕೈ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವರಿಗೆ ಶಾಕ್ ನೀಡಿದ್ದಾರೆ.
ಭ್ರಷ್ಟಾಚಾರ ಪ್ರಕರಣ: ಪಂಜಾಬ್ ಮಾಜಿ ಸಚಿವ ಸಾಧು ಸಿಂಗ್ ಬಂಧನ - ಭ್ರಷ್ಟಾಚಾರ ಪ್ರಕರಣ
ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಿಂಗ್, ಇದೀಗ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡನಿಗೆ ಶಾಕ್ ನೀಡಿದ್ದಾರೆ.
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಮ್ಸೋಟ್ ಅವರನ್ನ ಇಂದು ಬೆಳಗ್ಗೆ ಬಂಧಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಸಂಪುಟದಲ್ಲಿ ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದಾಗ 25 ಸಾವಿರಕ್ಕೂ ಅಧಿಕ ಮರಗಳನ್ನ ಅಕ್ರಮವಾಗಿ ಕಡಿಸಿರುವ ಆರೋಪ ಇವರ ಮೇಲಿದೆ.
ಸೋಮವಾರ ಮಧ್ಯಾಹ್ನ ವಿಜೆಲೆನ್ಸ್ ಇಲಾಖೆ(Vigilance Department) ಇವರನ್ನ ಫತೇಘರ್ ಸಾಹಿಬ್ ಜಿಲ್ಲೆಯ ಧರ್ಮಸೋತ್ ನಿವಾಸದಿಂದ ಬಂಧಿಸಿದೆ. ಇವರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಅವ್ಯವಹಾರ ನಡೆಸಿರುವ ಆರೋಪ ಇದೆ. ಮರ ಕಡಿಯಲು ಹಣ ಪಡೆದುಕೊಂಡಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಮಾಜಿ ಸಚಿವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭಗವಂತ್ ಮಾನ್ ಸಿಂಗ್ ಈ ಹಿಂದೆ ಎಚ್ಚರಿಕೆ ಸಹ ನೀಡಿದ್ದರು.