ಇಡುಕ್ಕಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಅನಗತ್ಯ ವಿವಾದ ಮೈಮೇಲೆ ಎಳೆದುಕೊಂಡಿದ್ದ ಮಾಜಿ ಸಂಸದ ಜಾಯ್ಸ್ ಜಾರ್ಜ್ ಅವರು ತಮ್ಮ ಹೇಳಿಕೆಗೆ ಇಂದು ಕ್ಷಮೆಯಾಚಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಆ ರೀತಿಯಾಗಿ ಹೇಳಿಕೆ ನೀಡಿದ್ದಕ್ಕೆ ನಾನು ಕ್ಷಮೆಯಾಚಿಸುತ್ತೇನೆ. ಅವರ ವಿರುದ್ಧ ಹೇಳಿಕೆ ನೀಡಿದ್ದು, ನನ್ನ ಕಡೆಯಿಂದ ತಪ್ಪಾಗಿದೆ. ಈ ಮಾತುಗಳಿಂದ ಯಾರಿಗಾದರೂ ನೋವುಂಟು ಮಾಡಿದ್ದರೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಕುಮಿಲಿಯ ಅನಕ್ಕಾರದಲ್ಲಿ ಸಿಪಿಎಂ ಪೊಲಿಟ್‌ಬ್ಯುರೊ ಸದಸ್ಯರಾದ ಬೃಂದಾ ಕಾರಟ್ ಅವರು ಭಾಗವಹಿಸಿದ್ದ ಚುನಾವಣಾ ಸಾರ್ವಜನಿಕ ಸಭೆಯಲ್ಲಿ ಕ್ಷಮೆಯಾಚಿಸಿದರು.
ರಾಹುಲ್ ಗಾಂಧಿ ಮಹಿಳಾ ಕಾಲೇಜುಗಳಿಗೆ ಮಾತ್ರ ಭೇಟಿ ನೀಡಲಿದ್ದಾರೆ. ಎಐಸಿಸಿ ಮಾಜಿ ಅಧ್ಯಕ್ಷರೊಂದಿಗೆ ವ್ಯವಹರಿಸುವಾಗ ಹುಡುಗಿಯರು ಜಾಗರೂಕರಾಗಿರಬೇಕು ಎಂದಿದ್ದರು.