ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದಾಗಿನಿಂದಲೂ ಅಲ್ಲಿ ಸಿಲುಕಿಹಾಕಿಕೊಂಡಿರುವ ಭಾರತೀಯರ ಕರೆತರುವ ಕೆಲಸ ಜಾರಿಯಲ್ಲಿದೆ. ಇದೇ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿಗೆ ಕಳೆದ ಎರಡು ದಿನಗಳ ಹಿಂದೆ ಪತ್ರ ಬರೆದಿದ್ದ ಮಾಜಿ ಪ್ರಧಾನಿ ಹೆಚ್ಡಿಡಿ ಭಾರತೀಯ ವಿದ್ಯಾರ್ಥಿಗಳ ತ್ವರಿತ ಸ್ಥಳಾಂತರಕ್ಕೆ ಮನವಿ ಮಾಡಿದ್ದರು.
ಇದೀಗ ಸರಣಿ ಟ್ವೀಟ್ ಮಾಡಿರುವ ಹೆಚ್ಡಿ ದೇವೇಗೌಡ ಅವರು, ಉಕ್ರೇನ್ನಲ್ಲಿ ಸಿಲುಕಿಕೊಂಡಿರುವ ನಮ್ಮ ಯುವಕರು, ನಾಗರಿಕರ ರಕ್ಷಣೆಗೋಸ್ಕರ ಮನವಿ ಮಾಡುತ್ತಿರುವ ವಿಡಿಯೋಗಳನ್ನ ನೋಡಿ, ಹೃದಯ ಕರಗಿದೆ. ಯುದ್ಧ ಪೀಡಿತ ದೇಶದಿಂದ ಅವರನ್ನ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಬೇಕಾಗಿದೆ.
ಯುದ್ಧದ ಸನ್ನಿವೇಶದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನ ವಾಪಸ್ ಕರೆತರುವುದು ಕಷ್ಟ ಹಾಗೂ ಕಠಿಣ ಎಂಬುದು ನಮ್ಮೆಲ್ಲರಿಗೂ ಗೊತ್ತಿದೆ. ಆದರೆ, ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮನವಿ ಮಾಡಿಕೊಂಡಿರುವ ಹೆಚ್ಡಿಡಿ, ಬಿಕ್ಕಟ್ಟಿನ ಸಮಯದಲ್ಲಿ ಅವರೊಂದಿಗೆ ನಾವು ಕೈಜೋಡಿಸಿ, ಮನೋಸ್ಥೈರ್ಯ ಹೆಚ್ಚಿಸಬೇಕಾಗಿದೆ ಎಂದಿದ್ದಾರೆ.
ಇದನ್ನೂ ಓದಿರಿ:ಉಕ್ರೇನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ರಕ್ಷಣೆ 'ಅವಕಾಶವಾದವಲ್ಲ' ಜವಾಬ್ದಾರಿ: ಕೇಂದ್ರದ ವಿರುದ್ಧ ವರುಣ್ ಕಿಡಿ!
ಉಕ್ರೇನ್ನಲ್ಲಿ ಸಿಲುಕೊಂಡಿರುವ 1400 ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆತರುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದ್ದು, ಉಳಿದ ನಾಗರಿಕರು ಹಾಗೂ ವಿದ್ಯಾರ್ಥಿಗಳನ್ನ ಕರೆತರುವ ಕಾರ್ಯಾಚರಣೆ ಮುಂದುವರೆದಿದೆ. ಇದರ ಬೆನ್ನಲ್ಲೇ ವಿವಿಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.