ಲಖನೌ (ಉತ್ತರ ಪ್ರದೇಶ):ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಇಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಸಿಮ್ ಅರುಣ್ ಅವರು ಬಿಜೆಪಿಗೆ ಸೇರ್ಪಡೆಯಾದರು.
ಕಾನ್ಪುರದ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಅಸಿಮ್ ಅರುಣ್ ಅವರು ಈ ತಿಂಗಳ ಆರಂಭದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇಂದು ಲಖನೌದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು ಮಾತನಾಡಿದ ಅವರು, "ರಾಷ್ಟ್ರದ ಅಭಿವೃದ್ಧಿಗೆ ಹೊಸ ಮಾರ್ಗವನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಂದ ನಾನು ಪ್ರಭಾವಿತನಾಗಿದ್ದೇನೆ.
ಸಾಮಾಜಿಕ ಕಾರ್ಯಗಳಿಗೆ ಹೆಚ್ಚಿನ ಕೊಡುಗೆ ನೀಡಲು ರಾಜಕೀಯಕ್ಕೆ ಸೇರಲು ಬಿಜೆಪಿ ನನಗೆ ಸಲಹೆ ನೀಡಿದೆ. ನನ್ನ ಕೆಲಸದ ಅವಧಿಯಲ್ಲಿ ನಾನು ಮಾಡಲು ಸಾಧ್ಯವಾಗದಿರುವುದು ಬಹಳಷ್ಟಿದೆ. ಹಾಗಾಗಿ, ನಾನು ರಾಜಕೀಯಕ್ಕೆ ಪ್ರವೇಶಿಸಲು ನಿರ್ಧರಿಸಿದ್ದೇನೆ " ಎಂದು ಹೇಳಿದರು.