ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಬುಧವಾರ ಸಂಜೆ ಕೇಂದ್ರ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ಆಗಮಿಸಿದ್ದಾರೆ. ಸಿಂಗ್ ಅವರು ಮಂಗಳವಾರವೇ ರಾಜಧಾನಿಗೆ ಆಗಮಿಸಿದ್ದು, ಅಮಿತ್ ಶಾ ಅವರ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.
ನವಜೋತ್ ಸಿಂಗ್ ಸಿಧು ಜತೆಗಿನ ಭಿನ್ನಾಭಿಪ್ರಾಯದ ಬಳಿಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ, ಕ್ಯಾಪ್ಟನ್ ಅಮರೀಂದರ್ ಸಿಂಗ್ ಚಂಡೀಗಢದಿಂದ ದೆಹಲಿಗೆ ಆಗಮಿಸಿದ್ದಾರೆ.
ಮುಂದಿನ ದಿನಗಳಲ್ಲಿ ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹ ಕೇಳಿ ಬಂದಿದ್ದವು. ಈ ಸಾಧ್ಯತೆಯ ಬಗ್ಗೆ ಕೇಳಿದಾಗ, ಸಿಂಗ್ ಅವರು ತಮ್ಮ ಬೆಂಬಲಿಗರೊಂದಿಗೆ ಸಮಾಲೋಚಿಸಿ ಭವಿಷ್ಯದ ಬಗ್ಗೆ ನಿರ್ಧರಿಸಿರುವುದಾಗಿ ಹೇಳಿದ್ದರು.
ಆದರೆ, ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ಮಂಗಳವಾರ ಟ್ವೀಟ್ ಮಾಡಿದ್ದು, ಸಿಂಗ್ ತಮ್ಮ ಸ್ನೇಹಿತರನ್ನು ಭೇಟಿ ಮಾಡುತ್ತಿದ್ದಾರೆ. ಇದು ಅವರ ವೈಯಕ್ತಿಕ ಭೇಟಿ. ಯಾವುದೇ ಅನಗತ್ಯ ಊಹಾಪೋಹಗಳ ಅಗತ್ಯವಿಲ್ಲ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ:ಪಂಜಾಬ್ನಲ್ಲಿ ಮತ್ತಷ್ಟು ರಾಜಕೀಯ ಬಿಕ್ಕಟ್ಟು: ತುರ್ತು ಸಂಪುಟ ಸಭೆ ಕರೆದ ಸಿಎಂ