ಚಂಡೀಗಢ(ಪಂಜಾಬ್):ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಏಳು ಪುಟಗಳ ರಾಜೀನಾಮೆ ಪತ್ರ ಬರೆದು ಪಕ್ಷವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ. ಜೊತೆಗೆ, ಕಾರಣಗಳನ್ನೂ ಪತ್ರದಲ್ಲಿ ವಿವರಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ಅವರನ್ನು ನೇಮಿಸುವ ಕಾಂಗ್ರೆಸ್ ನಿರ್ಧಾರದ ಬಗ್ಗೆ ಸಿಂಗ್ ತಮ್ಮ ರಾಜೀನಾಮೆ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದರು. ಮುಂದೊಂದು ದಿನ ಕಾಂಗ್ರೆಸ್ ಹೈಕಮಾಂಡ್ ತನ್ನ ನಿರ್ಧಾರಕ್ಕೆ ವಿಷಾದಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.