ಪುಲ್ವಾಮಾ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯ ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಮತ್ತು ಅವರ ಪತ್ನಿ, ಮಗಳನ್ನು ಪುಲ್ವಾಮಾ ಜಿಲ್ಲೆಯ ಹರಿಪರಿಗಂ ಗ್ರಾಮದಲ್ಲಿರುವ ಅವರ ಮನೆಯಲ್ಲಿ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಕಾಶ್ಮೀರ ವಲಯ ಪೊಲೀಸರು ಈ ಬಗ್ಗೆ ಟ್ವೀಟ್ ಮಾಡಿದ್ದು, "ಭಯೋತ್ಪಾದಕರು ಹರಿಪರಿಗಂ ಅವಂತಿಪೋರಾದ ಎಸ್‌ಪಿಒ ಫಯಾಜ್ ಅಹ್ಮದ್ ಅವರ ಮನೆಗೆ ನುಗ್ಗಿ ಗುಂಡು ಹಾರಿಸಿದ್ದಾರೆ. ಈ ವೇಳೆ ಅವರ ಪತ್ನಿ ಮತ್ತು ಮಗಳ ಮೇಲೆ ಸಹ ಗುಂಡಿನ ದಾಳಿ ನಡೆದಿದೆ. ಫಯಾಜ್ ಮತ್ತು ಅವರ ಪತ್ನಿ ಮೃತಪಟ್ಟಿದ್ದಾರೆ" ಎಂದು ತಿಳಿಸಿದ್ದಾರೆ.
ದಾಳಿಯಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡು ತೀವ್ರವಾಗಿ ಗಾಯಗೊಂಡಿದ್ದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯ ವಿಶೇಷ ಪೊಲೀಸ್ ಅಧಿಕಾರಿ ಫಯಾಜ್ ಅವರ ಮಗಳು ಸಹ ಕೊನೆಯುಸಿರೆಳೆದಿದ್ದಾರೆ.