ನವದೆಹಲಿ:ಬೆಲೆ ಏರಿಕೆ, ಹಣದುಬ್ಬರ ಹಾಗೂ ಇತರೆ ವಿಚಾರಗಳನ್ನಿಟ್ಟುಕೊಂಡು ಅಧಿವೇಶನದೊಳಗೆ ಪ್ರತಿಭಟನೆ ನಡೆಸಿದ ನಾಲ್ವರು ಕಾಂಗ್ರೆಸ್ ಸಂಸದರು ಅಮಾನತುಗೊಂಡಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ. ಲೋಕಸಭೆಯ ಸಂಪೂರ್ಣ ಮಳೆಗಾಲದ ಅಧಿವೇಶನದಿಂದ ಈ ನಾಲ್ವರು ಸಂಸದರನ್ನು ಅಮಾನತುಗೊಳಿಸಲಾಗಿದೆ.
ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಇವರು, ಅಧಿವೇಶನ ನಡೆಯುತ್ತಿದ್ದ ವೇಳೆ ಕೈಯಲ್ಲಿ ಭಿತ್ತಿಪತ್ರ ಹಾಗೂ ಫಲಕ ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು. ಇವರಿಗೆ ಸ್ಪೀಕರ್ ಓಂ ಬಿರ್ಲಾ ಈ ಹಿಂದೆ ಎಚ್ಚರಿಕೆ ನೀಡಿದ್ದರು. ಆದರೆ, ಇಂದು ಸಹ ಅದೇ ರೀತಿ ನಡೆದುಕೊಂಡಿದ್ದಾರೆ. ಹೀಗಾಗಿ, ಅಮಾನತು ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಸಂಸದರಾದ ಮಾಣಿಕಂ ಟ್ಯಾಗೋರ್, ಜ್ಯೋತಿಮಣಿ, ರಮ್ಯಾ ಹರಿದಾಸ್ ಮತ್ತು ಟಿ ಎನ್ ಪ್ರತಾಪನ್ ಲೋಕಸಭೆಯ ಮಳೆಗಾಲ ಅಧಿವೇಶನದಿಂದ ಅಮಾನತುಗೊಂಡವರು.