ಶ್ರೀಕಾಕುಳಂ (ಆಂಧ್ರಪ್ರದೇಶ):ಪೊಲೀಸ್ ಜೀಪ್ಗೆ ಲಾರಿಯೊಂದು ಗುದ್ದಿದ ಪರಿಣಾಮ ನಾಲ್ವರು ಕಾನ್ಸ್ಟೇಬಲ್ಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸ್ ಜೀಪ್ಗೆ ಗುದ್ದಿದ ಲಾರಿ: ನಾಲ್ವರು ಕಾನ್ಸ್ಟೇಬಲ್ಗಳ ದುರ್ಮರಣ - ನಾಲ್ವರು ಕಾನ್ಸ್ಟೇಬಲ್ಗಳ ದುರ್ಮರಣ
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯೋಧನೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಬರುತ್ತಿದ್ದ ನಾಲ್ವರು ಪೊಲೀಸ್ ಕಾನ್ಸ್ಟೇಬಲ್ಗಳು ಸಾವನ್ನಪ್ಪಿದ್ದಾರೆ.

ಇಚ್ಚಪುರಂ ಪಟ್ಟಣದಲ್ಲಿ ಯೋಧನೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಶ್ರೀಕಾಕುಳಂನ ಜಿಲ್ಲಾ ಕೇಂದ್ರಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ತಿರುವು ತೆಗೆದುಕೊಳ್ಳುವ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಲಾರಿ ಪೊಲೀಸ್ ಜೀಪ್ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಪೊಲೀಸ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಕಾನ್ಸ್ಟೇಬಲ್ಗಳನ್ನು ಕೃಷ್ಣ, ಬಾಬುರಾವ್, ಆ್ಯಂಟನಿ, ಜನಾರ್ದನ ರಾವ್ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷಗೆ ಅಸ್ಪತ್ರೆಗೆ ರವಾನಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಸಾವಿಗೆ ಸಂತಾಪ ಸೂಚಿಸಿದ್ದಾರೆ.