ಕರ್ನಾಟಕ

karnataka

ETV Bharat / bharat

ಪಲ್ಟಿಯಾಗಿ ಆಟೋ ಮೇಲೆ ಬಿದ್ದ ಕಂಟೈನರ್ : ಸ್ಥಳದಲ್ಲೇ ನಾಲ್ವರ ದುರ್ಮರಣ - ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ

ಕಂಟೈನರ್​​ವೊಂದು ಪಲ್ಟಿಯಾಗಿ ಆಟೋ ಮೇಲೆ ಬಿದ್ದ ಪರಿಣಾಮ ಆಟೋ ಚಾಲಕ ಹಾಗೂ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೆಹಲಿಯಲ್ಲಿ ನಡೆದಿದೆ..

Four dead after a container capsized on an auto in Delhi
ಪಲ್ಟಿಯಾಗಿ ಆಟೋ ಮೇಲೆ ಬಿದ್ದ ಕಂಟೈನರ್

By

Published : Dec 18, 2021, 7:55 PM IST

ನವದೆಹಲಿ :ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾಗಾಂಧಿ ಸ್ಟೇಡಿಯಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಟೋರಿಕ್ಷಾದಲ್ಲಿ ಸವಾರಿ ಮಾಡುತ್ತಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಕಂಟೈನರ್​​ವೊಂದು ಪಲ್ಟಿಯಾಗಿ ಆಟೋ ಮೇಲೆ ಬಿದ್ದಿದೆ. ಪರಿಣಾಮ ಆಟೋ ಚಾಲಕ ಹಾಗೂ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಂಟೈನರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು, ಮೃತರ ಗುರುತು ಪತ್ತೆ ಹಚ್ಚಲು ಇನ್ನೂ ಸಾಧ್ಯವಾಗಿಲ್ಲ.

ಆಟೋ - ಕಂಟೈನರ್ ನಡುವೆ ಅಪಘಾತ

ಇದನ್ನೂ ಓದಿ:ಮರಕ್ಕೆ ಡಿಕ್ಕಿ ಹೊಡೆದ ಕಾರು; ಇಬ್ಬರು ಕಿರಿಯ ಕಲಾವಿದರು ಸೇರಿ ಮೂವರು ಸಾವು

ಸ್ಥಳಕ್ಕೆ ದೌಡಾಯಿಸಿದ ಐಪಿ ಸ್ಟೇಟ್ ಠಾಣೆಯ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದು, ಕಂಟೈನರ್ ಚಾಲಕನಿಗಾಗಿ ಬಲೆ ಬೀಸಿದ್ದಾರೆ.

ABOUT THE AUTHOR

...view details