ಜೈಪುರ:ರಾಜಸ್ಥಾನದ ಜಾಮ್ವಾ ರಾಮ್ಗಢದಲ್ಲಿರುವ ಟರ್ಪಂಟೈನ್ ತೈಲ ತಯಾರಿಕಾ ಘಟಕದಲ್ಲಿ ಭಾನುವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.
ತೈಲ ತಯಾರಿಕಾ ಘಟಕದಲ್ಲಿ ಭಾರಿ ಅಗ್ನಿ ಅವಘಡ ಮಾಹಿತಿ ಪಡೆದ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳೀಯರನ್ನು ಈ ಕುರಿತು ವಿಚಾರಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ: ಸಾರ್ವಜನಿಕ ಸೇವೆ ಮೂಲಕ ಮಿಲಿಯನೇರ್ಗಳಾದ ಉತ್ತರಾಖಂಡ್ ರಾಜಕಾರಣಿಗಳು
ಕಾರ್ಖಾನೆ ಮಾಲೀಕರು ಸ್ವಂತ ಮನೆಯಲ್ಲೇ ಕಾರ್ಖಾನೆ ಸ್ಥಾಪಿಸಿದ್ದರು ಎಂದು ತಿಳಿದುಬಂದಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದ ಬಿಜೆಪಿ ಮುಖಂಡ ಮಹೇಂದ್ರ ಪಾಲ್ ಮೀನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ