ಹನಮಕೊಂಡ(ತೆಲಂಗಾಣ): ಟಾಟಾ ಏಸ್ಗೆ ಲಾರಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿ, 21 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಹನಮಕೊಂಡ ಜಿಲ್ಲೆಯ ಶಾಯಂಪೇಟ ವಲಯದ ಮಾಂದರಿಪೇಟ ಗ್ರಾಮದಲ್ಲಿ ನಡೆದಿದೆ. ಪತ್ತಿಪಾಕ ಗ್ರಾಮದ ದಿನಗೂಲಿ ಕಾರ್ಮಿಕರು ಮೆಣಸಿನಕಾಯಿ ತೋಟಕ್ಕೆ ಕೆಲಸ ಮಾಡಲು ಮೊಗುಲ್ಲಪಲ್ಲಿಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ತೆಲಂಗಾಣದಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ, 21 ಮಂದಿಗೆ ಗಾಯ - ತೆಲಂಗಾಣದಲ್ಲಿ 21 ಮಂದಿ ಗಾಯ
ತೆಲಂಗಾಣದ ಹನಮಕೊಂಡ ಜಿಲ್ಲೆಯ ಶಾಯಂಪೇಟ ವಲಯದ ಮಾಂದರಿಪೇಟ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಮೃತರನ್ನು ಮಂಜುಳಾ(45), ರೇಣುಕಾ(48), ವಿಮಲಾ(50) ಎಂದು ಗುರುತಿಸಲಾಗಿದ್ದು, ಮತ್ತೊಂದು ಮೃತದೇಹದ ಗುರುತು ಪತ್ತೆಯಾಗಿಲ್ಲ. ಗಾಯಗೊಂಡ 21 ಮಂದಿಯನ್ನು ವಾರಂಗಲ್ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಎಸಿಪಿ ಶಿವರಾಮಯ್ಯ ನಾವು ಪ್ರಕರಣವನ್ನು ದಾಖಲಿಸಿದ್ದೇವೆ ಮತ್ತು ಅಪಘಾತಕ್ಕೆ ಕಾರಣವಾದ ಲಾರಿಯ ವಿವರಗಳನ್ನು ಪಡೆಯಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ:ಹಳಿ ಮೇಲೆ ವಿಡಿಯೋ ಮಾಡ್ತಿದ್ದಾಗ ಅವಘಡ : ರೈಲಿಗೆ ಸಿಲುಕಿ ಒಂದೇ ಊರಿನ ಮೂವರು ವಿದ್ಯಾರ್ಥಿಗಳು ಸಾವು