ನವದೆಹಲಿ :ಶುಕ್ರವಾರ ಜೈಲು ಅಧಿಕಾರಿಗಳು ಮತ್ತು ಕೆಲವು ಕೈದಿಗಳ ನಡುವೆ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ನಾಲ್ಕು ಕೈದಿಗಳು, ಸಹಾಯಕ ಸೂಪರಿಂಟೆಂಡೆಂಟ್ ಮತ್ತು ತಿಹಾರ್ ಜೈಲಿನ ವಾರ್ಡನ್ ಸೇರಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಡಿಜಿ ಸಂದೀಪ್ ಗೋಯಲ್ ಹೇಳಿದ್ದಾರೆ.
ಜೈಲಿನ ಅಧಿಕಾರಿಗಳು ಮತ್ತು ವಿಚಾರಣಾಧೀನ ಕೈದಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಸಹಾಯಕ ಸೂಪರಿಂಟೆಂಡೆಂಟ್ ಸುನಿಲ್ ಮತ್ತು ವಾರ್ಡನ್ ನೀರಜ್ ಶೋಕೀನ್ ಕೈದಿಗಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.