ಮಸುದಾ (ರಾಜಸ್ಥಾನ):ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಬಂಡನವಾರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ.
ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ: ನಾಲ್ವರ ಸಾವು - ಕಾರು ಮತ್ತು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ.
ಕಾರು ಮತ್ತು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ: ನಾಲ್ವರ ಸಾವು
ಕಾರು ಮಧ್ಯಪ್ರದೇಶದಿಂದ ರಾಜಸ್ಥಾನಕ್ಕೆ ಹೋಗುತ್ತಿದ್ದಾಗ ಟ್ರಕ್‌ಗೆ ಡಿಕ್ಕಿ ಹೊಡೆದು ಶಹಪುರ ನಿವಾಸಿಗಳಾದ ಹವಾ ಸಿಂಗ್, ಸಂದೀಪ್ ಸಿಂಗ್, ಶೇರ್ ಸಿಂಗ್ ಮತ್ತು ಸತ್ವೀರ್ ಮೃತ ಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಮೃತದೇಹಗಳನ್ನು ಬಂದನವಾಡ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಬಗ್ಗೆ ಮೃತರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಚಾಮರಾಜನಗರ: ಯಾತ್ರಿಕರ ಕಾರು ಪಲ್ಟಿಯಾಗಿ ಮಗು ಸಾವು, 6 ಮಂದಿಗೆ ಗಾಯ