ಶ್ರೀನಗರ(ಜಮ್ಮು-ಕಾಶ್ಮೀರ): ಇಲ್ಲಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಅಂಗಡಿವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಸಿಲಿಂಡರ್ಗಳು ಸ್ಫೋಟಗೊಂಡಿರುವ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದಂತೆ 14 ಮಂದಿ ಗಾಯಗೊಂಡಿದ್ದಾರೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ರೆಸಿಡೆನ್ಸಿ ರಸ್ತಯಲ್ಲಿರುವ ಸ್ಕ್ರ್ಯಾಪ್ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಅನೇಕ ಸಿಲಿಂಡರ್ಗಳು ಸ್ಫೋಟಗೊಂಡಿರುವ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗ್ತಿದೆ. ವಿದ್ಯುತ್ ವೈರಿಂಗ್ ಮಾಡ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು, ಬೆಂಕಿ ಹೊತ್ತಿಕೊಂಡಿದೆ.
ಇದನ್ನೂ ಓದಿ:4 ರಾಜ್ಯಗಳಲ್ಲಿ ಸರ್ಕಾರ ರಚಿಸುವ ಕಸರತ್ತು.. ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ಕೇಂದ್ರದಿಂದ ವೀಕ್ಷಕರ ನೇಮಕ
ಘಟನಾ ಸ್ಥಳಕ್ಕೆ ತೆರಳಿರುವ ಅಗ್ನಿಶಾಮಕ ದಳ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದು, ಬೆಂಕಿ ನಿಯಂತ್ರಣಕ್ಕೆ ತಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಜಮ್ಮು ವಲಯದ ಎಡಿಜಿಪಿ ಮುಖೇಶ್ ಸಿಂಗ್, ಸ್ಕ್ರ್ಯಾಪ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸಿಲಿಂಡರ್ಗಳು ಸ್ಫೋಟಗೊಂಡಿದ್ದು, ನಾಲ್ವರು ಸಾವನ್ನಪ್ಪಿ, 14 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಪರಿಹಾರ ಘೋಷಣೆ:ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿರುವ ಲೆಪ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗಳಾಗಿರುವವರಿಗೆ 25 ಸಾವಿರ ರೂ. ನೀಡುವುದಾಗಿ ತಿಳಿಸಿದ್ದಾರೆ.