ಆಂಧ್ರಪ್ರದೇಶ (ಅನಂತಪುರ): ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಮೃತಪಟ್ಟಿರುವ ಘಟನೆ ಅನಂತಪುರ ಜಿಲ್ಲೆಯ ಸೆಟ್ಟೂರು ವಲಯದ ಮುಳಕಲೇಡು ಗ್ರಾಮದಲ್ಲಿ ನಡೆದಿದೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದಾಗಿ ಪಕ್ಕದ ಮನೆಯ ಛಾವಣಿ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ದಾದು (35), ಶರ್ಫುನಾ (30), ಫಿರ್ದೋಜ್ (6) ಮತ್ತು ಜೈನುಬಿ (60) ಎಂದು ಗುರುತಿಸಲಾಗಿದೆ.
ಗ್ಯಾಸ್ ಸಿಲಿಂಡರ್ ಸ್ಫೋಟ, ನಾಲ್ವರ ಸಾವು - ಆಂಧ್ರಪ್ರದೇಶ ಗ್ಯಾಸ್ ಸಿಲಿಂಡರ್ ಸ್ಫೋಟ
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆಯ ಸೆಟ್ಟೂರು ವಲಯದ ಮುಳಕಲೇಡು ಗ್ರಾಮದಲ್ಲಿ ನಡೆದಿದೆ..
ಗ್ಯಾಸ್ ಸಿಲಿಂಡರ್ ಸ್ಫೋಟ: ನಾಲ್ವರು ಸಾವು
ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗೆ ಅನಂತಪುರಂನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.
ಓದಿ :ಪಿಎಸ್ಐ ಪರೀಕ್ಷೆ ಅಕ್ರಮ: ಕಿಂಗ್‌ಪಿನ್ ಆರ್‌ಡಿಪಿ ಆಪ್ತ ಅರೆಸ್ಟ್- ಬಂಧಿತರ ಸಂಖ್ಯೆ 33ಕ್ಕೆ ಏರಿಕೆ