ಕರ್ನಾಟಕ

karnataka

ETV Bharat / bharat

ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣು ಬಿಗಿದುಕೊಂಡ! - गाजीपुर न्यूज टुडे

ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದ ಬಳಿಕ ವ್ಯಕ್ತಿಯೋರ್ವ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಗಾಜಿಪುರ್ ಜಿಲ್ಲೆಯಲ್ಲಿ ನಡೆದಿದೆ.

ಕುಟುಂಬಸ್ಥರ ಆತ್ಮಹತ್ಯೆ
ಕುಟುಂಬಸ್ಥರ ಆತ್ಮಹತ್ಯೆ

By

Published : Apr 18, 2022, 3:59 PM IST

ಗಾಜಿಪುರ್ (ಉತ್ತರಪ್ರದೇಶ): ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾದ ಘಟನೆ ಜಿಲ್ಲೆಯ ಸಾದತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವ್ಯಕ್ತಿಯೋರ್ವ ಮೊದಲು ತನ್ನ ಪತ್ನಿ ಮತ್ತು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದು, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸ್ ವರಿಷ್ಠಾಧಿಕಾರಿ ರಾಮ್ ಬದನ್ ಸಿಂಗ್ ಅವರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕೌಟುಂಬಿಕ ಕಲಹಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೆಂಡತಿ ಮತ್ತು ಆರು ವರ್ಷದ ಮಗ ಮತ್ತು ನಾಲ್ಕು ವರ್ಷದ ಮಗಳನ್ನು ಕೊಂದು ಆತ ಕೂಡ ಕೋಣೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ಬಾಗಿಲು ತೆರೆಯದೇ ಇದ್ದಾಗ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಬಾಗಿಲು ಒಡೆದು ನೋಡಿದಾಗ ಮನೆಯೊಳಗೆ ನಾಲ್ವರ ಶವ ಪತ್ತೆಯಾಗಿದೆ.

ಸಾದತ್ ಪಟ್ಟಣದ ನಿವಾಸಿಯಾದ ಶಿವದಾಸ್ ಅಲಿಯಾಸ್ ಡಬ್ಲ್ಯೂ ಸೋಂಕರ್ (36) ರೈಲ್ವೆ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ. ಎಂಟು ವರ್ಷಗಳ ಹಿಂದೆ ರೀನಾ ಸೋಂಕರ್ ಎಂಬವರನ್ನು ಮದುವೆಯಾಗಿದ್ದರು. ಇವರಿಗೆ ರಾಹುಲ್ (6) ಮತ್ತು ತೇಜಲ್ (4) ಇಬ್ಬರು ಮಕ್ಕಳಿದ್ದರು. ಈತ ಪತ್ನಿಯೊಂದಿಗೆ ಆಗಾಗ ಜಗಳವಾಡುತ್ತಿದ್ದ ಎಂದು ಹೇಳಲಾಗಿದೆ. ಇದರಿಂದ ನೊಂದ ಹೆಂಡತಿ ಸುಮಾರು ಒಂದು ವರ್ಷ ತನ್ನ ತಾಯಿಯ ಮನೆಯಲ್ಲಿದ್ದಳು. ಬಳಿಕ ಪೋಷಕರು ಮನವೊಲಿಸಿ ಮತ್ತೆ ಒಂದು ಮಾಡಿದ್ದರು ಎಂದು ತಿಳಿದುಬಂದಿದೆ.

ನೆರೆಮನೆಯವರ ಪ್ರಕಾರ, ಶನಿವಾರ ಮತ್ತೆ ಇಬ್ಬರ ನಡುವೆ ಜಗಳವಾಗಿತ್ತು. ಆ ಬಳಿಕ ಬೆಳಿಗ್ಗೆ 7.30ರವರೆಗೂ ಬಾಗಿಲು ತೆರೆಯದೇ ಇದ್ದಾಗ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ : ರಮೇಶ್ ಜಾರಕಿಹೊಳಿ ಭೇಟಿಯಾದ ತುಂಡು ಗುತ್ತಿಗೆದಾರರು

ABOUT THE AUTHOR

...view details