ಆಂಧ್ರಪ್ರದೇಶ: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ.
ವಿಶಾಖಪಟ್ಟಣಂ: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು - ಆಂಧ್ರಪ್ರದೇಶದ ವಿಶಾಖಪಟ್ಟಣಂನ ಮಧುರವಾಡ
ಆಂಧ್ರಪ್ರದೇಶದ ವಿಶಾಖಪಟ್ಟಣಂನ ಮಧುರವಾಡದ ಮಿಥಿಲಪುರಿಕಲಾನಿಯ ಆದಿತ್ಯ ಟವರ್ಸ್ ಬಳಿಯ ಅಪಾರ್ಟ್ಮೆಂಟ್ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
![ವಿಶಾಖಪಟ್ಟಣಂ: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು Four members of the same family died](https://etvbharatimages.akamaized.net/etvbharat/prod-images/768-512-11408885-thumbnail-3x2-lekh.jpg)
Four members of the same family died
ಬಂಗಾರು ನಾಯ್ಡು (50), ನಿರ್ಮಲಾ (46), ದೀಪಕ್ (22) ಮತ್ತು ಕಶ್ಯಪ್ (19) ಅನುಮಾನಾಸ್ಪದವಾಗಿ ಮೃತಪಟ್ಟವರು. ಇವರು ಕಳೆದ 8 ತಿಂಗಳಿಂದ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಮಧುರವಾಡದ ಮಿಥಿಲಪುರಿಕಲಾನಿಯ ಆದಿತ್ಯ ಟವರ್ಸ್ ಬಳಿಯ ಅಪಾರ್ಟ್ಮೆಂಟ್ವೊಂದರ ಐದನೇ ಮಹಡಿಯಲ್ಲಿ ವಾಸಿಸುತ್ತಿದ್ದರು. ಸಾವಿಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ.
ಈ ಕುರಿತು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.