ಒಡಿಶಾ:2019ರ ಆಗಸ್ಟ್‌ನಲ್ಲಿ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಐಪಿಸಿ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ) ಅಡಿಯಲ್ಲಿ 20-25 ವರ್ಷದೊಳಗಿನ ನಾಲ್ವರನ್ನು ನ್ಯಾಯಾಲಯ ಶಿಕ್ಷೆಗೊಳಪಡಿಸಿದ್ದು, ತಲಾ 2,000 ರೂ. ದಂಡ ವಿಧಿಸಿದೆ.
ನಾಲ್ವರು ಆರೋಪಿಗಳು ಮತ್ತು ಮಹಿಳೆ ಒಡಿಶಾ ಮೂಲದವರಾಗಿದ್ದು, ಮಹೇಶ್ವರಂನ ಇಟ್ಟಿಗೆ ಗೂಡುಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 16ರ ರಾತ್ರಿ ಮಹಿಳೆ ಬಹಿರ್ದೆಸೆಗೆ ಹೋದಾಗ ನಾಲ್ವರು ಆರೋಪಿಗಳು ಆಕೆಯನ್ನು ಹಿಂಬಾಲಿಸಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿ ಪರಾರಿಯಾಗಿದ್ದರು.
ಘಟನೆಗೆ ಸಂಬಂಧಿಸಿದಂತೆ ಮಹಿಳೆ, ಮಹೇಶ್ವರಂ ಪೊಲೀಸರಿಗೆ ದೂರು ನೀಡಿದ್ದರು. 2019ರ ನವೆಂಬರ್‌ನಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು.